ಮಂಗಳೂರು: ಕರ್ನಾಟಕ–ಕೇರಳ ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತಕ್ಕೀಡಾಗಿ ಆರು ಮಂದಿ ಮೃತಪಟ್ಟಿದ್ದಾರೆ.
ತಲಪಾಡಿ ಬಳಿ ಬ್ರೇಕ್ ಫೇಲಾಗಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೊದಲು ಜನರತ್ತ ನುಗ್ಗಿ ಬಳಿಕ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಮಗು ಸೇರಿ ಒಂದೇ ಕುಟುಂಬದ ಐವರು ಹಾಗೂ ಆಟೋ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳದ ಕಾಸರಗೋಡು ದಿಕ್ಕಿನಿಂದ ಮಂಗಳೂರು ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಹಾಗೂ ಒಂದು ಮಗು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.