ನೇಪಾಳದಲ್ಲಿ ಕ್ಷಿಪ್ರ ವಿದ್ಯಮಾನ; ಪ್ರಧಾನಿ ಕೆಪಿ ಶರ್ಮಾ ಒಲಿ ರಾಜಿನಾಮೆ
ಕಠ್ಮಂಡು: ನೇಪಾಳದಲ್ಲಿ ಸರ್ಕಾರದ ವಿರುದ್ಧ ಜನರು ಬಂಡಾಯ ಎದ್ದಿದ್ದಾರೆ. ಸಂಘರ್ಷ ತಾರಕಕ್ಕೇರಿರುವಂತೆಯೇ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಚೀನಾ ದೇಶದ ಪರ ಒಲವು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ಕೆಪಿ ಶರ್ಮಾ ಒಲಿ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಅವರು ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ಸಹಿತ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಲು ಮುಂದಾದರು. ಇದನ್ನು ಖಂಡಿಸಿ ನೇಪಾಳದಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿದೆ.
ಈ ಎಲ್ಲಾ ಒಟ್ಟಾರೆ ಬೆಳವಣಿಗೆಗಳ ನಡುವೆ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದಾರೆ.






















































