ವಿಜಯಪುರ: ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನಗಳು ಉದ್ಘಾಟನೆಗೆ ಸಜ್ಜಾಗುತ್ತಿರುವ ವಿಜಯಪುರದ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಗಮಿಸಿದೆ.
ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದಿಳಿದಿವೆ. ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ.
ಇದರೊಂದಿಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ. ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ ತಿಳಿಸಿದ್ದಾರೆ.