ಬೆಂಗಳೂರು: ಅನ್ನ ಭಾಗ್ಯ ‘ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ, ಪ್ರಧಾನಿ ನರೇಂದ್ರ ಮೋದಿ ಅವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಐ.ವೈ.ವಿಜಯೇಂದ್ರ ಹೇಳಿದ್ದಾರೆ.
ಅಣ್ಣ ಭಾಗ್ಯ ಯೋಜನೆ ವಿಚಾರದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಜಯೇಂದ್ರ, ಕೇಂದ್ರದ ‘ಗರೀಬ್ ಕಲ್ಯಾಣ್’ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಪಸರಿಸಿದ ಬಡವರ “ಸ್ವಾಭಿಮಾನದ ಭಾಗ್ಯ” ಎಂದಿದ್ದಾರೆ.
ಸಚಿವ @Madhu_Bangarapp ನವರೇ
ಅನ್ನ ಭಾಗ್ಯ ‘ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ, ಪ್ರಧಾನಿ ಶ್ರೀ @narendramodi ಜೀ ಅವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲ ‘ಗರೀಬ್ ಕಲ್ಯಾಣ್’ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಪಸರಿಸಿದ ಬಡವರ “ಸ್ವಾಭಿಮಾನದ ಭಾಗ್ಯ”
ನಿಮ್ಮ ಕಲ್ಪನೆಯಲ್ಲಿ “ಅನ್ನಭಾಗ್ಯ ಜನರಿಗೆ ನೀಡುವ… pic.twitter.com/YKR9Jt9tQ8
— Vijayendra Yediyurappa (@BYVijayendra) September 23, 2025
ನಿಮ್ಮ ಕಲ್ಪನೆಯಲ್ಲಿ “ಅನ್ನಭಾಗ್ಯ ಜನರಿಗೆ ನೀಡುವ ಭಿಕ್ಷೆ ಎಂದು ಭಾವಿಸಿದಂತಿದೆ, ಅದು ಭಿಕ್ಷೆಯಲ್ಲ ಜನರ ಹಕ್ಕು” ಎಂಬ ಪರಿಜ್ಞಾನ ನಿಮಗಿರಲಿ, ಈ ಹಕ್ಕು ಪಡೆಯಲು ನಿಮ್ಮ ಮನೆಯ ಕೆಲಸಗಾರನಿಂದಿಡಿದು ದೇಶದ ಕಟ್ಟ ಕಡೆಯ ಪ್ರಜೆಗೂ ದಕ್ಕುವ ಸಂವಿಧಾನದ ಸೌಭಾಗ್ಯ ಎಂದು ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ವಿಜಯೇಂದ್ರ ಪ್ರಯೋಗಿಸಿರುವ ಟ್ವೀಟಾಸ್ತ್ರ ಗಮನಸೆಳೆದಿದೆ.
ತ್ರಿವಿಧ ದಾಸೋಹದ ಈ ನಾಡಿನಲ್ಲಿ ಅನ್ನಭಾಗ್ಯದ ಹೆಸರಿನಲ್ಲಿ ಬಡವರನ್ನು ಹಂಗಿಸುವ ಮೂಲಕ ಚಾಲನೆ ವೃತ್ತಿ ಆರಿಸಿಕೊಂಡಿರುವ ಶ್ರಮಿಕ ಚಾಲಕ ಸಮೂಹವನ್ನು ಕಾಂಗ್ರೆಸ್’ನವರು ಅವಮಾನಿಸಿದ್ದಾರೆ ಎಂದವರು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಮಕ್ಕಳು ‘ಅಕ್ಷರಭಾಗ್ಯ’ ಪಡೆಯುವಲ್ಲಿ ನಿತ್ಯ ಬವಣೆ ಅನುಭವಿಸುತ್ತಿದ್ದಾರೆ. ಮೊದಲು ಅದರತ್ತ ಗಮನ ಕೊಡಿ, ಸಾವಿರಾರು ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳಿಲ್ಲದೇ ನಲುಗುತ್ತಿವೆ, ಕಟ್ಟಡಗಳ ಮೇಲ್ಛಾವಣಿ ಕುಸಿದು ಅವಘಡಗಳು ಸಂಭವಿಸುತ್ತಿವೆ, ಇಂದಿಗೂ ಅದೆಷ್ಟೋ ಶಾಲೆಗಳಲ್ಲಿ ಶೌಚಾಲಯಗಳಿಲ್ಲದೆ ಮಕ್ಕಳು ಮುಜುಗರ ಅನುಭವಿಸುತ್ತಿದ್ದಾರೆ ಎಂದು ಶಿಕ್ಷಣ ಮಧು ಬಂಗಾರಪ್ಪ ಅವರ ಗಮನಸೆಳೆದಿದ್ದಾರೆ.
ಮೊದಲು ಊರು ಸುತ್ತಿಬನ್ನಿ, ಹಳ್ಳಿಗಾಡಿನ ಶಾಲೆಗಳ ಸ್ಥಿತಿ ನೋಡಿ ಬನ್ನಿ, ಅಗತ್ಯ ಶಿಕ್ಷಕರಿಲ್ಲದೇ ಮಕ್ಕಳು ಅಕ್ಷರ ವಂಚಿತರಾಗುತ್ತಿರುವ ಬಗ್ಗೆ ನಿತ್ಯ ವರದಿಯಾಗುತ್ತಿದೆ ‘ವಿದ್ಯಾಭಾಗ್ಯ’ಕ್ಕೆ ಆಗುತ್ತಿರುವ ಕಂಟಕವನ್ನು ತಪ್ಪಿಸುವ ಸಾಮರ್ಥ್ಯವಿಲ್ಲದ ನೀವು ‘ಅನ್ನ ಭಾಗ್ಯ’ದ ಹೆಸರಿನಲ್ಲಿ ಬಡವರನ್ನು ಅವಮಾನಿಸಲು ಲಜ್ಜೆಗೇಡಿತನದ ವರ್ತನೆ ಪ್ರದರ್ಶಿಸಿದ್ದೀರಿ ಎಂದು ವಿಜಯೇಂದ್ರ ಹೇಳಿದ್ದಾರೆ.
ಶಿಕ್ಷಣ ಸಚಿವ ಸ್ಥಾನದ ಸಜ್ಜನಿಕೆ ಬಿಟ್ಟು ಮಾತನಾಡುವ ನಿಮ್ಮಿಂದ “ಶಿಕ್ಷಣ ಇಲಾಖೆಯನ್ನು ದೇವರೇ ಕಾಪಾಡಬೇಕಾದ ಸ್ಥಿತಿ ಬಂದೊದಗಿರುವುದು ಈ ನಾಡಿನ ದೌರ್ಭಾಗ್ಯವಾಗಿದೆ” ಎಂದು ವಿಜಯೇಂದ್ರ ಹೇಳಿದ್ದಾರೆ.