ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕ್ರೈಸ್ತ ಎಸ್‍ಸಿ ಜಾತಿಗಳನ್ನು ಜಾತಿ ಗಣತಿ ಪಟ್ಟಿಯಲ್ಲಿ ಮರೆಮಾಚಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಕ್ರೈಸ್ತ ಜಾತಿಯ ಜೊತೆಗೆ ಹಿಂದೂ ಜಾತಿಯ ಹೆಸರುಗಳನ್ನು ನಮೂದಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿತ್ತು. ಈ ಸಂಬಂಧ ಬಿಜೆಪಿ ನಾಯಕರು ರಾಜ್ಯಪಾಲರಿಗೂ ದೂರು ನೀಡಿತ್ತು. ಇದೀಗ ಈ ತಪ್ಪನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರಿಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಇದು ತಮ್ಮ ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದೆ ಎಂದಿದೆ.
ಮತಾಂತರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ಕೊಡುವ ಈ ಪ್ರಯತ್ನದ ವಿರುದ್ಧ ಧ್ವನಿ ಎತ್ತಿದ ಎಲ್ಲಾ ಸಮಾಜಗಳ ಮಠಾಧೀಶರು, ಪ್ರಮುಖರು ಮತ್ತು ರಾಜಕೀಯ ನಾಯಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ತಡವಾಗಿಯಾದರೂ ಸಮಯೋಚಿತ ನಿರ್ಧಾರ ಕೈಗೊಂಡ ಆಯೋಗಕ್ಕೆ ಕೃತಜ್ಞತೆಗಳು ಎಂದಿದೆ.
ಹಿಂದುಳಿದ ವರ್ಗಗಳ ಆಯೋಗವು ಕ್ರೈಸ್ತ ಎಸ್‍ಸಿ ಜಾತಿಗಳನ್ನು ಜಾತಿ ಗಣತಿ ಪಟ್ಟಿಯಲ್ಲಿ ಮರೆಮಾಚಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಇದು ಬಿಜೆಪಿ ಹೋರಾಟಕ್ಕೆ ಸಂದ ಜಯವಾಗಿದೆ.
ಮತಾಂತರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ಕೊಡುವ ಈ ಪ್ರಯತ್ನದ ವಿರುದ್ಧ ಧ್ವನಿ ಎತ್ತಿದ ಎಲ್ಲಾ ಸಮಾಜಗಳ ಮಠಾಧೀಶರು, ಪ್ರಮುಖರು ಮತ್ತು ರಾಜಕೀಯ ನಾಯಕರ… pic.twitter.com/MnXSLFtVh7
— BJP Karnataka (@BJP4Karnataka) September 23, 2025