ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ನವೆಂಬರ್ 6 ಮತ್ತು 11 ರಂದು
ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು.
243 ಕ್ಷೇತ್ರಗಳ ಪೈಕಿ, 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಹಾಗೂ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತಗಳ ಎಣಿಕೆ ನಡೆಯಲಿದೆ ಎಂದವರು ವಿವರಿಸಿದ್ದಾರೆ.