ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ಕ್ಕಾಗಿ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟವಾಗಿದೆ. ಪಕ್ಷವು ಸ್ಪರ್ಧಿಸಲಿರುವ 101 ಸ್ಥಾನಗಳಲ್ಲಿ 71 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಉಳಿದ 30 ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಪಟ್ಟಿಯಲ್ಲಿ ಮಾಜಿ ಸಚಿವರು ಮಂಗಲ್ ಪಾಂಡೆ, ರೇಣು ದೇವಿ ಮತ್ತು ತಾರಕೇಶ್ವರ ಪ್ರಸಾದ್ ಸಿಂಗ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಪ್ರಸ್ತುತ ವಿಧಾನಸಭಾಧ್ಯಕ್ಷ ನಂದ ಕಿಶೋರ್ ಯಾದವ್ ಅವರಿಗೆ ಟಿಕೆಟ್ ನೀಡದಿರುವುದು ಗಮನಾರ್ಹವಾಗಿದೆ.
243 ಸದಸ್ಯರ ಬಿಹಾರ ವಿಧಾನಸಭೆಗಾಗಿ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.