ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಹೈಕೋರ್ಟ್ ಪೀಠದ ಆದೇಶವನ್ನು ಸ್ವಾಗತಿಸಿರುವ ಅವರು, ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಬಣ್ಣಿಸಿದ್ದಾರೆ.
ಚಿತ್ತಾಪುರದಲ್ಲಿ RSS ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ವಿಜಯೇಂದ್ರ ಸಾಮಾಜಿಕ ಮಾಧ್ಯಮ “X’ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯಗೊಂಡಂತಾಗಿದೆ ಎಂದವರು ವಿಶ್ಲೇಷಿಸಿದ್ದಾರೆ.
ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ. ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ @INCKarnataka ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ.
ಚಿತ್ತಾಪುರದಲ್ಲಿ @RSSorg ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ… pic.twitter.com/Qkw1uQmaxK
— Vijayendra Yediyurappa (@BYVijayendra) October 19, 2025