ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್ಎಸ್ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ.
ಸರ್ಕಾರದ ವಾದ ಬಗ್ಗೆ ತೃಪ್ತವಾಗದ ನ್ಯಾಯಪೀಠ, ಪ್ರಕರಣವನ್ನು ಏಕಸದಸ್ಯ ಪೀಠದಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಎಂದು ವಿಭಾಗೀಯ ಪೀಠ ತಿಳಿಸಿದೆ.


















































