ಮಂಗಳೂರು: ‘ಮೇಕೆದಾಟು’ ಸುಪ್ರೀಂ ಕೋರ್ಟಿನಲ್ಲಿ ಬಗ್ಗೆ ಕರ್ನಾಟಕದ ಪರ ಮಹತ್ವದ ತೀರ್ಪು ಪ್ರಕಟವಾಗಿರುವ ಬಗ್ಗೆ ರಾಜ್ಯದ ವಕೀಲರ ತಂಡ ಅಡ್ವೊಕೇಟ್ ಜನರಲ್ ಕೆ ಶಶಿ ಕಿರಣ್ ಶೆಟ್ಟಿ ನೇತೃತ್ವದ ಕಾನೂನು ತಜ್ಞರನ್ನು ಅಭಿನಂದಿಸಿದೆ. ಬಹಳ ವರ್ಷಗಳ ಬಳಿಕ ಕ್ರಾಂತಕಕ್ಕೆ ಇಂಥದ್ದೊಂದು ಐತಿಹಾಸಿಕ ಗೆಲುವು ಲಭಿಸಿದೆ ಎಂದು ನ್ಯಾಯವಾದಿಗಳು ಆದ ಕರಾವಳಿಯ ಕಾಂಗ್ರೆಸ್ ನಾಯಕರು ಪ್ರತಿಕ್ರಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವುದರಿಂದ ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರಿಯಲು ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಯೋಜನೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕನಸ್ಸಾಗಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಪಾದಯಾತ್ರೆ ಸಹಿತ ಹಲವು ಹೋರಾಟಗಳನ್ನು ನಡೆಸಿವೆ. ಇದೀಗ ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ ಎಂದು ಪದ್ಮರಾಜ್ ಹೇಳಿದ್ದಾರೆ
ಕರ್ನಾಟಕದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದ್ದು, ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಮಹತ್ವದ ಗೆಲುವಿಗೆ ಪ್ರಯತ್ನಿಸಿರುವ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ನೇತೃತ್ವದ ಕಾನೂನು ತಜ್ಞರ ತಂಡಕ್ಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಪದ್ಮರಾಜ್ ಅಭಿನಂದಿಸಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಂತೆ ವಿಶ್ಲೇಷಿಸುವ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷರೂ ಆದ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ್, ಕರ್ನಾಟಕದ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಈ ವಿಚಾರದಲ್ಲಿ ಸರ್ಕಾರದ ದೃಢ ನಿಲುವು ಹಾಗೂ ವಕೀಲರ ಸತತ ಪ್ರಯತ್ನವು ಫಲ ನೀಡಿದೆ ಎಂದು ವಿಶ್ಲೇಷಿಸಿದ್ದಾರೆ.
ಇನ್ನು ಮುಂದೆ ಕಾನೂನು ತೊಡಕಿಲ್ಲದೆ ಸರ್ಕಾರ ಕ್ರಮವಹಿಸಿ, ಮಹತ್ವಾಕಾಂಕ್ಷೆಯ ಯೋಜನೆ ನಿರಾತಂಕವಾಗಿ ಅನುಷ್ಠಾನಗೊಳ್ಳಲಿದೆ ಎಂದು ಮನೋರಾಜ್ ರಾಜೀವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

























































