ಬೆಂಗಳೂರು: ಸಿಎಂ ಕುರ್ಚಿ ರೇಸಿನಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ ಎಂದಿದ್ದಾರೆ.
ಶನಿವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಉಪಹಾರ ನಡೆಸಿರುವ ಅವರು ಮುಖ್ಯಮಂತ್ರಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು.
ಬಳಿಕ ಸಾಮಾಜಿಕ ಮಾಧ್ಯಮದಲ್ಲೂ ಪೋಸ್ಟ್ ಹಾಕಿ ಗಮನಸೆಳೆದಿದ್ದಾರೆ. ‘ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.
‘ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು. ಅದೂ ನಮ್ಮಿಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದೇವೆ’ ಎಂದು ಡಿಕೆಶಿ ಹೇಳಿದ್ದಾರೆ.
ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ.
ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ… https://t.co/ASYJYcRC86
— DK Shivakumar (@DKShivakumar) November 29, 2025






















































