ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನಲ್ಲಿ 1945ರ ಏಪ್ರಿಲ್ 22ರಂದು ಜನಿಸಿದ್ದ ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಉಮೇಶ್ ವಿಧಿವಶರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.




























































