ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್.ವಿ. ದೇವರಾಜ್ ವಿಧಿವಶರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆರ್.ವಿ.ದೇವರಾಜ್ ಅವರು ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಯಿತು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದ ದೇವರಾಜ್, ಪಕ್ಷಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅವರ ಅಗಲಿಕೆಯು ಪಕ್ಷಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪರಮೇಶ್ವರ್ ತಮ್ಮ ಸಾಮಾಜಿಕ ಮಾಧ್ಯಮ ‘X’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆರ್.ವಿ.ದೇವರಾಜ್ ಅವರು ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಯಿತು. ಅವರಿಗೆ ನನ್ನ ಭಾವಪೂರ್ಣ ನಮನಗಳು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದ ದೇವರಾಜ್, ಪಕ್ಷಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅವರ ಅಗಲಿಕೆಯು ಪಕ್ಷಕ್ಕೆ… pic.twitter.com/xFdExF9K2n
— Dr. G Parameshwara (@DrParameshwara) December 1, 2025






















































