ಬೆಂಗಳೂರು: “ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.




















































