ವಿಜಯಪುರ: ಶಾಸಕರ ಅನುದಾನದಡಿ ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಎರಡು ಮಹೀಂದ್ರ ವಾಹನಗಳನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಹಸ್ತಾಂತರಿಸಿದರು. ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ವಾಹನಗಳನ್ನು ಒದಗಿಸಲಾಗಿದೆ.
ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಸಂಸದ ರಮೇಶ ಜಿಗಜಿಣಗಿ, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ರವಿ ಕುಮಾರ್, ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾಧಿಕಾರಿ ಆನಂದ್ ಕೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪೊಲೀಸ್ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಈ ವಾಹನಗಳು ಸಹಕಾರಿಯಾಗಲಿವೆ ಎಂದು ಈ ವೇಳೆ ತಿಳಿಸಲಾಯಿತು.





















































