ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf
— Ramalinga Reddy (@RLR_BTM) December 25, 2025
ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.



















































