ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಂಗ ಮಾರ್ಗ ಬಗ್ಗೆ ಚರ್ಚೆ ನಡೆದಿರುವಾಗಲೇ ಬೆಂಗಳೂರಿಗೆ ಮತ್ತೊಂದು ಕಾಮಗಾರಿಗೆ ಸಿದ್ಧತೆ ನಡೆದಿದೆ. ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕೇಮರ್ ಪ್ರಕಟಿಸಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು 9,000 ಕೋಟಿ ರೂ. ವೆಚ್ಚದಲ್ಲಿ 40 ಕಿ.ಮೀ ಉದ್ದದ ಮೆಟ್ರೋ ಸಂಯೋಜಿತ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ನಮ್ಮ ಸರ್ಕಾರ ಸಿದ್ಧತೆ ನಡೆಸಿದೆ ಎಂದಿದ್ದಾರೆ.
ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯು ನಗರದ ಸುಗಮ ಸಂಚಾರಕ್ಕೆ ಹೊಸ ಆಯಾಮ ನೀಡಲಿದೆ ಎಂದು ಅವರು ತಮ್ಮ್ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಡಬಲ್ ಡೆಕ್ಕರ್ ಫ್ಲೈಓವರ್
ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು 9,000 ಕೋಟಿ ರೂ. ವೆಚ್ಚದಲ್ಲಿ 40 ಕಿ.ಮೀ ಉದ್ದದ ಮೆಟ್ರೋ ಸಂಯೋಜಿತ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ನಮ್ಮ ಸರ್ಕಾರ ಸಿದ್ಧತೆ ನಡೆಸಿದೆ. ಈ ಯೋಜನೆಯು ನಗರದ ಸುಗಮ ಸಂಚಾರಕ್ಕೆ ಹೊಸ ಆಯಾಮ ನೀಡಲಿದೆ. pic.twitter.com/AKhG3XxDOi
— DK Shivakumar (@DKShivakumar) January 8, 2026



















































