ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಉತ್ತರಾಯಣ ಪರ್ವಕಾಲದಲ್ಲಿ ಸಂಕ್ರಾಂತಿ ಸಡಗರ ಹೆಚ್ಚಿದೆ. ನಾಡಿನ ದೇವಾಲಯಗಳಲ್ಲಿ ಮನೆ-ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಇದೇ ವೇಳೆ, ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ (15.01.2026), ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಅಧಿಕಾರಿಗಳಿಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ (15.01.2026), ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಅಧಿಕಾರಿಗಳಿಗೆ ನಾನು ಸೂಚಿಸಿದ್ದು, ಈ ಸಂಬಂಧ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ.
ದೇವಸ್ಥಾನಕ್ಕೆ ಬರುವ ಪ್ರತಿಯೊಬ್ಬ ಭಕ್ತರಿಗೂ ಹಬ್ಬದ ಸವಿಯುಣ್ಣುವಂತಾಗಲಿ ಎಂಬುದು ನಮ್ಮ ಆಶಯ. 🌾… pic.twitter.com/YLDTrwxNh1
— Ramalinga Reddy (@RLR_BTM) January 14, 2026

























































