ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ಗ್ರಾಮದ ರೈತಾಪಿ ಕುಟುಂಬದ ದಿ.ವೆಂಕಟಸ್ವಾಮಪ್ಪ ಹಾಗೂ ರತ್ನಮ್ಮ ದಂಪತಿಯ ಪುತ್ರರಾದ ಶಶಿಕುಮಾರ್ ವಿ. ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ಬಿಎ ಆನರ್ಸ್ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರು ವಿವಿಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ರವರು ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಗೋವಿಂದಪ್ಪ ಎಂ. ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಹೆಳವರ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಧ್ಯಯನ ; ಸ್ವಾತಂತ್ಯೋತ್ತರ ಕಾಲಘಟ್ಟ ವಿಶ್ಲೇಷಣೆ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶೇಷವಾಗಿ ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಂಶೋಧನೆ ಇದಾಗಿದೆಬೆಂಗಳೂರು ವಿಶ್ವವಿದ್ಯಾಲಯ ಮೂಲಗಳು ತಿಳಿಸಿವೆ.


























































