ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಹಾಗೂ ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪಾಲ್ಗೊಂಡರು.
ತಿರುವನಂತಪುರಂ – ಚೆರ್ಲಪಲ್ಲಿ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು, ತಿರುವನಂತಪುರಂ – ತಂಬರಮ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು, ನಾಗರಕೋಯಿಲ್ – ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ತ್ರಿಸ್ಸೂರ್ – ಗುರುವಾಯೂರ್ ಪ್ಯಾಸೆಂಜರ್ ರೈಲುಗಳಿಗೆ ಹಸಿರು ನಿಶಾನೆ ತೋರಿದಪ್ರಧಾನಿ, ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ವಿತರಣೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

























































