ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಖಂಡಿಸಿ ಹೋರಾಟ ನಡೆಸುತ್ತಿರುವ ಸಂಸದ ತೇಜಸ್ವಿ ಸೂರ್ಯ ಸೋಮವಾರ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಪೋಲೀಸರ ಈ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ ಎಂದು ವಿಜಯೇಂದ್ರ ಖಂಡಿಸಿದ್ದಾರೆ. ಮೆಟ್ರೋ ದರ ಏರಿಕೆಯ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡಲು ಹುನ್ನಾರ ನಡೆಸಿದ್ದ ಸರ್ಕಾರದ ಜನವಿರೋಧಿ ಧೋರಣೆ ವಿರೋಧಿಸಿ ಜನರ ಧ್ವನಿಯಾಗಿ ಪ್ರತಿಭಟಿಸುವುದು ಈ ಹಿಟ್ಲರ್ ಸರ್ಕಾರದಲ್ಲಿ ಅಪರಾಧವಾಗಿದೆ. ಜನಪರ ಧ್ವನಿಯನ್ನು ಹತ್ತಿಕ್ಕಲು, ಬಿಜೆಪಿ ನಾಯಕರನ್ನು ಬಂಧಿಸಿರುವುದು ಅಕ್ಷಮ್ಯ. ಆ ಮೂಲಕ ಸತ್ಯವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದರೆ ಅದು ಸರ್ಕಾರದ ಭ್ರಮೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ಮೆಟ್ರೋ ದರ ಏರಿಕೆ ಸದ್ಯಕ್ಕೆ ತಡೆಹಿಡಿಯಲ್ಪಟ್ಟಿದ್ದರೂ, ಈ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ನಿಲ್ಲುತ್ತಿಲ್ಲ. ನಿಮ್ಮ ಹಿಟ್ಲರ್ ಶಾಹಿಯಿಂದ ನಿಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದವರು ಹೇಳಿದ್ದಾರೆ.
ಅಧಿಕಾರದ ಮದದಲ್ಲಿ ಜನಾಕ್ರೋಶವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಪ್ರಜಾತಂತ್ರದ ಹಕ್ಕುಗಳನ್ನು ಎತ್ತಿಹಿಡಿಯಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ, ಸಾರ್ವಜನಿಕರೂ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ @Tejasvi_Surya ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ @CKRBJP ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ! ಇದನ್ನು ನಾನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಮೆಟ್ರೋ… pic.twitter.com/Rf9LNtcXUK
— Vijayendra Yediyurappa (@BYVijayendra) February 9, 2026























































