ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಜರುಗಿದ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ ಗಮನಸೆಳೆಯಿತು. ಶಾಸಕ ಸುರೇಶ್ ಬಾಬು ಆಯೋಜಿಸಿದ್ದ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಆಚರಣಾ ಸಮಾರಂಭ, ವಿವಿಧ ಸರ್ಕಾರಿ ಸವಲತ್ತುಗಳ ವಿತರಣೆ ಮತ್ತು ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪಾಲ್ಗೊಂಡರು.
ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀ ಸತ್‌ಕೀರ್ತಿನಾಥ ಸ್ವಾಮೀಜಿ ಹಾಗೂ ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಶಾಸಕರಾದ ಎಮ್.ಟಿ ಕೃಷ್ಣಪ್ಪ, ರಮೇಶ್ ಬಾಬು, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕ, ಜನತಾದಳದ ಜಿಲ್ಲಾಧ್ಯಕ್ಷರೂ ಆದ ಮಾಜಿ ಶಾಸಕ ಎಚ್. ನಿಂಗಪ್ಪ, ನಿಕೇತ್ ರಾಜ್ ಮೌರ್ಯ ಸೇರಿದಂತೆ ಹಿರಿಯ ಮುಖಂಡರು ಉಪಸ್ಥಿತರಿದ್ದರು.



























































