ತುಮಕೂರು: ಜಿಲ್ಲೆಯ ಐತಿಹಾಸಿಕ ಮಧುಗಿರಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣಕ್ಕೆ ಭಾರತ ಸರ್ಕಾರದ ಪುರಾತತ್ವ ಇಲಾಖೆಯಿಂದ ಅನುಮೋದನೆ ನೀಡುವಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಸದಸ್ಯರಾದ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಅವರನ್ನು ಭೇಟಿ ಮಾಡಿದ ಅವರು, ಮಧುಗಿರಿ ಬೆಟ್ಟವು ತುಮಕೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದ್ದು, ರೋಪ್‌ವೇ ನಿರ್ಮಾಣವಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಾಮರ್ಥ್ಯ ಹೊಂದಿದೆ ಎಂದು ವಿವರಿಸಿದರು.
ರೋಪ್‌ವೇ ಯೋಜನೆ ಜಾರಿಯಾದರೆ ಮಧುಗಿರಿ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದಲ್ಲದೆ, ತುಮಕೂರು ಜಿಲ್ಲೆಯ ಮತ್ತು ಗಳನ್ನು ಅಡಿಯಲ್ಲಿ ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆ ಮಾಡುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಅಗತ್ಯ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಲ್ಲಿ ಮತ್ತೊಮ್ಮೆ ವಿನಂತಿಸಲಾಗಿದೆ.
ತುಮಕೂರು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಮೂರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸೂಕ್ತ ಅನುಮೋದನೆ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಮಧುಗಿರಿ, ಸಿದ್ದರ ಬೆಟ್ಟ ಹಾಗೂ ದೇವರಾಯದುರ್ಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಸೋಮಣ್ಣ ತಿಳಿಸಿದ್ದಾರೆ.


















































