ಬೆಂಗಳೂರು: ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕಣನೂರುಪಾಳ್ಯ ಗ್ರಾಮದ ಗೋವಿಂದರಾಜು ಕೆ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪ್ರದಾನ ಮಾಡಿದೆ.
“ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ರಾಜ್ಯ ಧರ್ಮದ ಒಂದು ವಿಮಾರ್ಶಾತ್ಮಕ ಅಧ್ಯಯನ’ ಎಂಬ ವಿಷಯದ ಕುರಿತು ಮಂಡಿಸಿದ ಪ್ರೌಢ ಪ್ರಬಂಧಕ್ಕೆ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಕೆ ಅವರಿಗೆ ಡಾಕ್ಟರೇಟ್ ಪದವಿ ಯನ್ನು ನೀಡಲಾಗಿದೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಂಗಳೂರು ವಿಶ್ವ ವಿದ್ಯಾಲಯದ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ.ಸಿ.ಶಿವರಾಜು ಅವರ ಮಾರ್ಗದರ್ಶನದಲ್ಲಿ ನೀಡಿ ಗೌರವಿಸಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.























































