ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ದಿವಂಗತ ಸಿ.ತಿಪ್ಪಣ್ಣ ಮತ್ತು ದಿವಂಗತ ಸಿ. ಹುಲಿಗೇಮ್ಮ ದಂಪತಿಯ ಹಿರಿಯ ಪುತ್ರ, ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಈಶ್ವರ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸಕ್ತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕನ್ನಡ ಚಿತ್ರರಂಗಕ್ಕೆ ಹಂಸಲೇಖ ರವರ ಕೊಡುಗೆ: ಒಂದು ಅಧ್ಯಯನ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಶೋಧನಾ ಮಹಾಪ್ರಬಂಧವು ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ಮೈಲುಗಲ್ಲು ಮತ್ತು ವಿಶಿಷ್ಟ ದಾಖಲೆಯಾಗಿದೆ. ಸಿನಿಮಾ ರಂಗದ ಹಲವಾರು ಪರಿಣಿತರು, ಸಿನಿಮಾ ಪತ್ರಕರ್ತರು, ಸಿನಿಮಾ ಕಲಾವಿದರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೇರಿದಂತೆ ಕನ್ನಡ ಸಿನಿಮಾದ ವಿವಿಧ ಸಂಘಗಳು, ಹಂಸಲೇಖ ರವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಸಮಗ್ರವಾಗಿ ಸಂಶೋಧನೆ ನಡೆಸಿರುವ ಮಹಾಪ್ರಬಂಧದ ಕುರಿತು ಹರ್ಷ ವ್ಯಕ್ತಪಡಿಸಿ ಪ್ರಶಂಸಿದ್ದಾರೆ.























































