ಚಿತ್ರದುರ್ಗ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶಿವಲಿಂಗಪ್ಪ ಅವರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಆತಂಕ ಮೂಡಿಸಿದೆ.
ಸುಮಾರು 50 ವರ್ಷದ ಶಿವಲಿಂಗಪ್ಪ ರಸಗೊಬ್ಬರ ಅಂಗಡಿ ನಡೆಸುತ್ತಿದ್ದರು. ಅವರು ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದು, ಗುರುವಾರ ಚಿತ್ರದುರ್ಗ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಮುಖದ ಗುರುತು ಸಿಗದ ರೀತಿಯಲ್ಲಿ ಶವ ಪತ್ತೆಯಾಗಿರುವುದರಿಂದ ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.
ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.






















































