ಬೆಂಗಳೂರು: ರಾಜ್ಯದ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಸ್ಮರಿಸಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, “ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿಯೊಂದು ಮಾತಿಗೂ ಬದ್ಧರಾಗಿ ನಡೆದು, ನುಡಿದಂತೆ ನಡೆದ ಹೆಮ್ಮೆ ನಮಗಿದೆ” ಎಂದು ತಿಳಿಸಿದ್ದಾರೆ.
“ಸಶಕ್ತ, ಸಮೃದ್ಧ ಮತ್ತು ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣದ ದಿಕ್ಕಿನಲ್ಲಿ ನಮ್ಮ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ. ಈ ಪ್ರಯತ್ನ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದುವರಿಯಲಿದೆ” ಎಂದು ಅವರು ಹೇಳಿದ್ದಾರೆ.
ಸರ್ಕಾರದ ಪ್ರಮುಖ ಸಾಧನೆಗಳನ್ನು ಉಲ್ಲೇಖಿಸಿರುವ ಮುಖ್ಯಮಂತ್ರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 30 ಯೋಜನೆಗಳಡಿ 13,118 ಫ್ಲಾಟ್‌ಗಳ ನಿರ್ಮಾಣ ಪೂರ್ಣಗೊಂಡಿದ್ದು, 10,153ಕ್ಕೂ ಹೆಚ್ಚು ಫ್ಲಾಟ್‌ಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ₹455.87 ಕೋಟಿ ಬಿಡುಗಡೆ ಮಾಡಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಂಡಿದೆ ಎಂದಿದ್ದಾರೆ.
ಹೆಬ್ಬಾಳ ಜಂಕ್ಷನ್‌ನಲ್ಲಿ ಫ್ಲೈಓವರ್ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
“ಈ ಮೂರು ವರ್ಷಗಳಲ್ಲಿ ಸಲ್ಲಿಸಿದ ಸೇವೆಯ ಶ್ರೇಯಸ್ಸು ಪ್ರತಿಯೊಬ್ಬ ಕನ್ನಡಿಗನಿಗೂ ಸೇರಿದೆ” ಎಂದು ಮುಖ್ಯಮಂತ್ರಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ.… pic.twitter.com/2r3J4xpZ2M
— Siddaramaiah (@siddaramaiah) May 23, 2026



























































