ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕವಸ್ತುವನ್ನು ಜಪ್ತಿ ಮಾಡಿದ್ದಾರೆ.

ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಮಾದಕವಸ್ತು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕವಸ್ತು, ಸಾಗಾಟಕ್ಕೆ ಬಳಸಿದ್ದ ಕಾರು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.




































































