ಬೆಂಗಳೂರು, ಆಗಸ್ಟ್ 29: ಜಯನಗರ ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಹೊಸ ಜವಾಬ್ದಾರಿಯೊಂದನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸೌಮ್ಯಾ ರೆಡ್ಡಿ ಸಂತಸ ಹಂಚಿಕೊಂಡಿದ್ದಾರೆ.
ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಗೆ ಉಸ್ತುವಾರಿಯಾಗಿ ನನ್ನನ್ನು ನೇಮಿಸಿರುವ ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಶ್ಮಿತಾ ದೇವ್ ರವರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ.
ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ನನಗೆ ಈ ಜವಾಬ್ದಾರಿಯನ್ನು ನೀಡಿರುವ ನಮ್ಮ ಪಕ್ಷದ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ ಮತ್ತು ನಮ್ಮ ದೇಶಾದ್ಯಂತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ’ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.