ಮಾಜಿ ಸಚಿವ , ಜೆಡಿಎಸ್ ಹಿರಿಯ ನಾಯಕ ಅಮರನಾಥ್ ಶೆಟ್ಟಿ ಇನ್ನು ನೆನಪು ಮಾತ್ರ.. ಕಳೆದ ಹಲವಾರು ದಿನಗಳಿಂದ ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು.ಆದ್ರೆ ಚಿಜಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ
80 ವರ್ಷದ ಈ ರಾಜಕೀಯ ಧುರೀಣ 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದು;ಕಾರ್ಕಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ರು.ಮುಂದೆ ಪುರಸಭೆ , ಸೇವಾ ಬ್ಯಾಂಕ್‍ನಲ್ಲಿ ಸೇವೆ ಸಲ್ಲಿಸಿದ ಇವರು ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ . ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿಯೂ ಕೂಡ ಇವರ ಸೇವೆ ಸಲ್ಲಿಸಿದ್ದಾರೆ.. ಕರಾವಳಿ ಜನರ ಮನಸ್ಸಿನಲ್ಲಿ ಮನೆ ಮಾತಾಗಿರೋ ಅಮರನಾಥ್ ಶೆಟ್ಟಿ ಪ್ರಸ್ತುತ ಮೂಡುಬಿದಿರೆಯ ಎಂಸಿಎಸ್ ಬ್ಯಾಂಕ್‍ನಲ್ಲಿ ಅಧ್ಯಕ್ಷರಾಗಿದ್ದು .ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಇಂದು ವಿಧಿವಶರಾಗಿದ್ದಾರೆ.