ಬಹಳ ದಿನಗಳಿಂದ ಕಾಯುತ್ತಿದ್ದ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದು; ರಾಜಭವನದಲ್ಲಿ 10 ಸಚಿವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.ರಾಜ್ಯಪಾಲ ವಜುಭಾಯಿವಾಲಾ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಮೊದಲಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಇನ್ನು ಇದೇ ಸಂದರ್ಭದಲ್ಲಿ ಅಚ್ಚರಿಯ ಸಂಗತಿಯೊಂದು ನಡೆದಿದೆ. ಬಿಎಸ್‍ವೈ ಹೇಳಿದ ಮಾತಿನಂತೆ ನುಡಿದಿದ್ದಾರೆ ಅನ್ನೋ ಕಾರಣಕ್ಕೆ ಬಿಎಸ್‍ವೈ ಕಾಲಿಗೆ ಸಚಿವ ಎಸ್.ಟಿ ಸೋಮಶೇಖರ್ ಬಿದ್ದಿದ್ದಾರೆ.
ನಂತರ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್ ಸಿಂಗ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್ , ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್, ಶೆರಿದಂತೆ ಹತ್ತು ಶಾಸಕರು ಸಚಿವ ಸ್ಥಾನದ ಪ್ರಮಾಣವಚನ ಸ್ವೀಕರಿಸಿದ್ರು.ಇನ್ನು ಗುರುವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿದೆ




























































