ಪ್ರತಿಪಕ್ಷ ನಾಯಕರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸರ್ಕಾರದ ಜೊತೆಗೆ ಕೈಜೋಡಿಸಲು ನಾಯಕರ ಸಲಹೆ ನೀಡಿದ್ದು, ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿಗಳಿಗೂ ರಕ್ಷಣಾ ಸಾಧನಾ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಸರ್ವಪಕ್ಷ ಸಭೆಯಲ್ಲಿ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಮಾಸ್ಕ್, ಸ್ಯಾನಿಟೈಸರ್ ಸರಬರಾಜಿಗೆ ತಕ್ಷಣ ಕ್ರಮಕೈಗೊಳ್ಳಲಿದ್ದು, ತಾಲೂಕು, ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನ ಒದಗಿಸಲಾಗುವುದು. ರಾಜ್ಯದ ಗಡಿಗಳಲ್ಲಿ ಸಿಲುಕಿದವರನ್ನು ತಪಾಸಣೆ ಮಾಡಿ ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಸೋಂಕಿಗೊಳಗಾದ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಿದ್ದು, ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಕ್ಕೆ ತಲುಪಿಸಲಾಗುವುದು. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಟೆಸ್ಟಿಂಗ್ ಕಿಟ್ ವಿತರಣೆ ಮಾಡಲಾಗುವುದು. ಇದರೊಂದಿಗೆ ಫಲಾನುಭವಿಗಳ ಮನೆಗೆ ಪಡಿತರ ತಲುಪಿಸುವ ವ್ಯವಸ್ಥೆ ಕಲ್ಪಿಸಲು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.