ಬ್ಯಾಂಕ್‍ಗಳನ್ನು ವಿಲೀನಗೊಳಿಸಿದ ಬೆನ್ನಲೇ ಕೇಂದ್ರ ಸರ್ಕಾರ ಸರ್ಕಾರಿ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ನೀತಿ ಆಯೋಗದ ಸಲಹೆ ಮೇರೆಗೆ ಕಾರ್ಯಪ್ರವತ್ತವಾಗಿರುವ ಕೇಂದ್ರ ಹಣಕಾಸು ಈ ಪಕ್ರಿಯೆಗೆ ಚಾಲನೆ ನೀಡಿದೆ ಎಂದು ತಿಳಿದು ಬಂದಿದೆ.ಕೇಂದ್ರ ಹಣಕಾಸು ಇಲಾಖೆಯ ಉನ್ನತಾಧಿಕಾರಿಗಳ ಗುಂಪೆÇಂದು ಸರ್ಕಾರಿ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಬಗ್ಗೆ ಆರಂಭಿಕ ಹಂತದ ಮಾತುಕತೆ ನಡೆಸಿದ್ದಾರೆ ಅನ್ನೋ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಮಾತುಕತೆಯಲ್ಲಿ ಮಾತುಕತೆಯ ಹಂತದಲ್ಲಿ ಪಂಜಾಬ್ ಸಿಂಧ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ನಂತರ ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ.
ಆದರೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಖಾಸಗಿ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣ ಮಾಡಿದ್ದರು.ಆದ್ರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಮೊದಲು ರಾಜ್ಯ ಸರ್ಕಾರದ ಬ್ಯಾಂಕುಗಳನ್ನು ವಿಲೀನಗೊಳಿಸಿ ಅವುಗಳ ಶಕ್ತಿ ಕುಂದಿಸಲಾಗಿತ್ತು. ವಿಲೀನದ ಬಳಿಕ ಈಗ ಖಾಸಗೀಕರಣಗೊಳಿಸುವ ಪ್ರಕ್ರಿಯೆಯೂ ಕೂಡ ಆರಂಭವಾಗಿದೆ.