ಸೆಂಚುರಿ ಸ್ಟಾರ್ ಶಿವಣ್ಣ ಅಭಿನಯದ ‘ಭಜರಂಗಿ 2’ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಭಾನುವಾರ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಶಿವರಾಜ್ ಕುಮಾರ್ ಹುಟ್ಟುಹಬ್ಬ ದಿನವಾದ ಭಾನುವಾರ ಶಿವಣ್ಣ ಅವರ ಮುಂದಿನ ಚಿತ್ರ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಅಂದರೆ ಕೇವಲ 5 ತಾಸುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಈ ಟೀಸರ್’ನ್ನು ವೀಕ್ಷಿಸಿ ದಾಖಲೆ ನಿರ್ಮಿಸಿದ್ದಾರೆ. ಎ.ಹರ್ಷ ನಿರ್ದೇಶನದ ಈ ಸಿನಿಮಾ ದಿಗ್ಗಜರ ಕಾಂಬಿನೇಷನ್’ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ.