ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದರೂ ಹಲವು ಸಚಿವರು ಹೀನಾಯ ಸೋಲು ಅನುಭವಿಸುವ ಮೂಲಕ ಮೋದಿ ರ್ಕಾರದ ಬಗ್ಗೆ ಜನರಿಗೆ ಆಕ್ರೋಶ ಇದೆ ಎಂಬುದನ್ನೂ ಜನ ತೋರಿಸಿದ್ದಾರೆ.
ಈ ಚುನಾವಣೆಯಲ್ಲಿ ಮೋದಿ ಸಂಪುಟದ ಪ್ರಭಾವಿ ಸಚಿವರಾಗಿದ್ದಸ್ಮೃತಿ ಇರಾನಿ ಹೀನಾಯವಾಗಿ ಸೋಲುಂಡಿದ್ದಾರೆ. ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್ನ ಕಿಶೋರಿ ಲಾಲ್ ರ್ಮಾ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲೊಪ್ಪಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರ ಕುಟುಂಬದ ಸಹಾಯಕರೆನಿಸಿರುವ ಕೆ.ಎಲ್.ರ್ಮಾ ಅವರು ಅಮೇಠಿ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ವಶಕ್ಕೆ ತಂದೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.






















































