ಚಾಮರಾಜನಗರ : ಹನೂರು ಸಮೀಪದ ಎಲ್ಲೇಮಾಳ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಸಂಭವಿಸಿದೆ. ಬಸ್ ದಿನಸಿ ಅಂಗಡಿಗೆ ಪಕ್ಕ ಕುಳಿತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಕಾಲು ಮುರಿದಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಬಸ್ ಎಲ್ಲೇಮಾಳ ಗ್ರಾಮದಲ್ಲಿ ಚಾಲಕರ ನಿಯಂತ್ರಣ ತಪ್ಪಿ ದ್ವಿ ಚಕ್ರ ವಾಹನದ ಮೇಲೆ ಕುಳಿತಿದ್ದ ಕೌದಳ್ಳಿ ಗ್ರಾಮದ ಮಹೇಶ್ (31)ಎಂಬವನಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಗೆ ಕಾಲು ಮುರಿದಿದೆ ಅವರನ್ನು ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ..
ಈ ಪ್ರದೇಶದಲ್ಲಿ ಕಿರಿದಾದ ರಸ್ತೆ ಇದ್ದು ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇರುವ ಪರಿಣಾಮ ಅಲ್ಲದೇ ವಿಶೇಷ ಸಂದರ್ಭದಲ್ಲಿ ಮಹದೇಶ್ವರ ಬೆಟ್ಟಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇರುವ ಕಾರಣ , ಜೊತೆಗೆ ಅತಿ ವೇಗದಲ್ಲಿ ವಾಹನಗಳು ಚಲಿಸುತ್ತಿರುವುದರಿಂದಾಗಿ ಅಪಘಾತ ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಹೇಳಿದ್ದಾರೆ.




















































