ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಸಮೀಪವೇ ಇರುವ ಚಿಕ್ಕಬಳ್ಳಾಪುರ ಬಳಿ ಶನಿವಾರ ರಾತ್ರಿ ಘೋರ ದುರಂತ ಸಂಭವಿಸಿದೆ. ಶನಿವಾರ ರಾತ್ರಿ ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಮಾನಿಗೋಪಾಲಕೃಷ್ಣ ಕೆರೆಗೆ ಪ್ರಯಾಣಿಕರಿದ್ದ ಕಾರೊಂದು ಉರುಳಿ ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಬೆಂಗಳೂರು ಮೂಲದವರು ಎನ್ನಲಾಗಿದೆ. ಇವರು ಬೆಂಗಳೂರಿನಿಂದ ಬಾಗೇಪಲ್ಲಿಯತ್ತ ತೆರಳುತ್ತಿದ್ದರೆನ್ನಲಾಗಿದೆ.
ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಅಮಾನಿಗೋಪಾಲಕೃಷ್ಣ ಕೆರೆ ಬಳಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


















































