ವಾಷಿಂಗ್ಟನ್: ಟ್ವಿಟರ್’ ಕೈಕೊಟ್ಟ ಪರಿಣಾಮ ಸೋಮವಾರ ಸಾಮಾಜಿಕ ಮಾಧ್ಯಮ ಅಲ್ಲೋಲಕಲ್ಲೋಲವಾಯಿತು. ಎಲಾನ್ ಮಸ್ಕ್ ಒಡೆತನದ ಟ್ವಿಟರ್’ಗೆ ಸೋಮವಾರ ಜಗತ್ತಿನ ಬಹುತೇಕ ಪ್ರದೇಶಗಳಲ್ಲಿ ತಾಂತ್ರಿಕ ಸಮಸ್ಯೆಗೆ ತುತ್ತಾಯಿತು. ಸರ್ವರ್ ಏರುಪೇರಿನಿಂದಾಗಿ ಟ್ವಿಟರ್ ಬಳಕೆ ನಿಧಾನವಾಗಿತ್ತು. ಈ ಬಗ್ಗೆ ಸಾರ್ವಜನಿಕವಲಯದಲ್ಲಿ ಮಸ್ಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಈ ನಡುವೆ, ಸೈಬರ್ ದಾಳಿಯಿಂದಾಗಿ ಈ ರೀತಿ ಆಗಿದೆ ಎಂದು ‘X’ ಮಾಲೀಕ ಎಲಾನ್ ಮಸ್ಕ್ ತಿಳಿಸಿದ್ದಾರೆ. ಈ ಕುರಿತು ತಮ್ಮ ‘X’ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ‘X’ ಮೇಲೆ ಸೈಬರ್ ದಾಳಿ ನಡೆದಿದ್ದು, ಸಂಘಟಿತ ಗುಂಪು ಅಥವಾ ವಿರೋಧಿ ರಾಷ್ಟ್ರ ಇದರ ಹಿಂದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
“There was (still is) a massive cyberattack against 𝕏. We get attacked every day, but this was done with a lot of resources. Either a large, coordinated group and/or a country is involved. Tracing …” ಎಂದು ಅವರು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.