ನವದೆಹಲಿ: ದೇಶದಲ್ಲಿ ಇಂದಿನಿಂದ ನೂತನ ಕಾನೂನು ವ್ಯವಸ್ಥೆ ಜಾರಿಗೆ ಬಂದಿದೆ. ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳ ಬದಲಾಗಿ ಕಳೆದ ಅವಧಿಯಲ್ಲಿ ಮೋದಿ ಸರ್ಕಾರ ಪರಿಚಯಿಸಿರುವ ಭಾರತೀಯ ನಾಗರಿಕ್ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಜಾರಿಗೆ ಬಂದಿದೆ.
ಬಿಎನ್‌ಎಸ್‌ಎಸ್ ಸೆಕ್ಷನ್ 173 ರ ಅಡಿ ದೆಹಲಿಯಲ್ಲಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ದೆಹಲಿ ರೈಲು ನಿಲ್ದಾಣ ಬಳಿ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಕೇಸು ದಾಖಲಾಗಿದೆ.





































































