ದಿಸ್ಪುರ್: ಅಸ್ಸಾಂನ ಗೋಲಾಘಾಟ್ ಬಳಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ.
ಬುಧವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತಿಲಿಂಗ ಮಂದಿರ ಕಡೆ ಹೋಗುತ್ತಿದ್ದ ಬಸ್ಸಿ ಮತ್ತು ಎದುರಿನಿಂದ ಬರುತ್ತಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.