ರಾಮನಗರ: ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಲಾರಿಯ ಹಿಂಭಾಗ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.
ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಈ ವಿದ್ಯಾರ್ಥಿಗಳು ಆಂಧ್ರ ಮೂಲದವರಾಗಿದ್ದು ಮೈಸೂರಿಗೆ ತೆರಳಿ ಬೆಂಗಳೂರಿಗೆ ಮರಳುತ್ತಿದ್ದಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
























































