ಭೀಕರ ಅಪಘಾತವೊಂದು ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಬಲಿ ಪಡೆದಿದೆ. ಶುಕ್ರವಾರ ಸಂಜೆ ನೆಲಮಾಕನಹಳ್ಳಿ ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಆಟೋ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ಸಮೀಪದ ನೆಲಮಾಕನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬಂಡೂರು ಗ್ರಾ.ಪಂ.ಅಧ್ಯಕ್ಷೆ ಮುತ್ತಮ್ಮ (45), ಬಸಮ್ಮಣಿ (30), ದಡದಪುರದ ವೆಂಕಟೇಶ್ (22) ಹಾಗೂ 2 ವರ್ಷದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮಳವಳ್ಳಿ ಗ್ರಾಮಾಂತರ ಪೋಲಿಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.