ಚೆನ್ನೈ: ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿದ್ದಾರೆ. ತಮಿಳು ಚಿತ್ರರಂಗದ ಸ್ಟಾರ್ ನಟ ವಿಜಯ್. ಲೋಕಸಭಾ ಚುನಾವಣೆಗೆ ಎರಡು ತಿಂಗಳುಗಳು ಇರುವಾಗಲೇ ನೂತನ ರಾಜಕೀಯ ಪಕ್ಷವನ್ನು ಹುಟ್ಟು ಹಾಕಿ ಸಂಚಲನ ಸೃಷ್ಟಿಸಿದ್ದಾರೆ.
ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿರುವ ದಳಪತಿ ವಿಜಯ್, ತಮ್ಮ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಘೋಷಿಸಿದ್ದಾರೆ. ಚೆನ್ನೈನಲ್ಲಿ ಇತ್ತೀಚಿಗೆ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷ ಉದಯಕ್ಕೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.
ಈ ಬಗ್ಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಳಿದೆ ಎಂದು ತಿಳಿಸಿದ್ದಾರೆ. ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದವರು ತಿಳಿಸಿದ್ದಾರೆ.