ಬೆಂಗಳೂರು: ಕೊಲೆ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸತ್ಕಾರ ನೀಡಲಾಗುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಆರೋಪ ಕುರಿತು ಪ್ರತಿಕ್ರಿಯಿಸಿದರು. ದರ್ಶನ್ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ ಎಂದವರು ತಿಳಿಸಿದರು.
ದರ್ಶನ್ಗೆ ಬಿರಿಯಾನಿ ಕೊಡುತ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.