ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಬೆಂಗಳೂರಿನ ವಸಂತನಗರ ಬಳಿಯ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಪುನಿತ್ ಅವರಿಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಎಂದಿನಂತೆ ಜಿಮ್ ಕಸರತ್ತು ನಡೆಸುತ್ತಿದ್ದ ವೇಳೆ ಪುನೀತ್ ರಾಜ್ ಕುಮಾರ್ ಅವರು ಕುಸಿದು ಬಿದ್ದರು. ತೀವ್ರ ಎದೆನೋವಿನಿಂದಾಗಿ ಅವರು ಕುಸಿದು ಬಿದ್ದರು. ಈಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯದ ಬಗ್ಗೆ ಆತಂಕ ಉಂಟಾಗಿದೆ ಎಂದು ಅವರ ಆಪ್ತರು ಹೇಳಿಕೊಂಡಿದ್ದಾರೆ.
👉 ಇದನ್ನೂ ಓದಿ.. ಪುನೀತ್‌ಗೆ ಆಗಿದ್ದಾದರೂ ಹೇಗೆ..? ವೈದ್ಯರು ಹೇಳಿದ್ದೇನು..?
ಈ ನಡುವೆ, ಸದ್ಯಕ್ಕೆ ಪುನೀತ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿರುವ ಆಸ್ಪತ್ರೆ ವೈದ್ಯರು, ಚಿಕಿತ್ಸೆಗೆ ಪುನೀತ್ ರಾಜಕುಮಾರ್ ಸ್ಪಂದಿಸುತ್ತಿದ್ದಾರೆಂದು ತಿಳಿಸಿದ್ದಾರೆ. ಈಗಾಗಲೇ ಇಸಿಜಿ ಪರೀಕ್ಷೆಯೂ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.