ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ವಿಧಿವಶರಾಗಿದ್ದಾರೆ. 83ರ ಹರೆಯದ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರು ಎಳೆದಿದ್ದಾರೆ.
ಪಟ್ಟಮ್ಮಾಳ್ ವೀರಸ್ವಾಮಿ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಬೆಂಗಳೂರಿನಲ್ಲಿರುವ ರವಿಚಂದ್ರನ್ ಅವರ ನಿವಾಸದಲ್ಲಿ ಇಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.