ಬೆಂಗಳೂರು: ಶುಕ್ರವಾರ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತ್ಯಕ್ರೀಯೆ ಶನಿವಾರ ನೆರವೇರಿತು. ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಮುಖ್ಯಮಂತ್ರಿ ಸೇರಿದಂತೆ ಗಣ್ಯರನೇಕರು ಅಗಲಿದ ತಾರೆಗೆ ಶ್ರದ್ದಾಂಜಲಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿಯವರು ಕರ್ನಾಟಕ ಚಲನಚಿತ್ರ ಕಂಡ ಅಪರೂಪದ ನೈಜ ನಟನೆಯ ಕಲಾವಿದೆ. ಲೀಲಾವತಿಯವರು ಪರಿಪೂರ್ಣ ಕಲಾವಿದೆ, ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕಾಗಿತ್ತು ಎಂದು ಮುಖ್ಯಮಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ @siddaramaiah ಅವರು ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಲೀಲಾವತಿಯವರ ಪುತ್ರ ವಿನೋದ್ ರಾಜ್ ಮತ್ತು ಕುಟುಂಬ ಸದಸ್ಯರನ್ನು ಭೇಟಿಯಾಗಿ, ಸಾಂತ್ವನ ಹೇಳಿದರು. pic.twitter.com/gMVART0KBM
— CM of Karnataka (@CMofKarnataka) December 9, 2023













































































