ಬೆಂಗಳೂರು: ಕನ್ನಡ ಚಿತ್ರರಂಗ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಕೆಲ ಸಮಯದ ಹಿಂದೆ ನಟಿ ಜಯಶ್ರೀ ಸಾವಿಗೆ ಶರಾಣಾದ ಬೆನ್ನಲ್ಲೇ ಇದೀಗ ಮತ್ತೊಬ್ಬರು ಉದಯೋನ್ಮುಖ ನಟಿ ಶವವಾಗಿ ಪತ್ತೆಯಾಗಿದ್ಧಾರೆ.
ಕೊಡಗು ಮೂಲದ ನಟಿ ಸೌಜನ್ಯ ಅವರು ಬೆಂಗಳೂರು ಹೊರವಲಯದ ಕುಂಬಳಗೋಡು ಬಳಿಯ ಫ್ಲಾಟೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಚೌಕಟ್ಟು, ಫನ್ ಸಿನಿಮಾಗಳಲ್ಲಿ ನಟಿಸಿರುವ ಸೌಜನ್ಯ, ಧಾರವಾಹಿಗಳಲ್ಲೂ ಅಭಿನಯಿಸಿದ್ದಾರೆ. ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಹೇಳಿಕೊಂಡಿದ್ದು, ಸಾವಿನ ನಿಖರ ಕಾರಣ ಗೊತ್ತಾಗಿಲ್ಲ.
ಮೃತದೇಹದ ಬಳಿ ಡೆತ್ ನೋಟ್ ರೀತಿಯ ಪತ್ರ ಪತ್ತೆಯಾಗಿದೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಕ್ಷಮಿಸಿ ಅಪ್ಪ-ಅಮ್ಮ ಎಂದು ಆ ಪತ್ರದಲ್ಲಿದೆ ಎನ್ನಲಾಗಿದೆ.
ಕುಂಬಳಗೂಡು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.