ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ, ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದಾರೆ. ಈ ಕುರಿತಂತೆ ಸುದೀಪ್ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಹೇಳಿರುವ ಅವರು, ಕಾಯಿಲೆ ಏನೆಂಬ ಬಗ್ಗೆ ಮಾಹಿತಿ ಬಹಿರಂಗ ಪಡಿಸಿಲ್ಲ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಹುಷಾರಿಲ್ಲ, ಈ ವೀಕೆಂಡ್‌ನೊಳಗೆ ಚೇತರಿಸಿಕೊಳ್ಳುತ್ತೇನೆ ಎಂದು ಕೊಂಡಿದ್ದೆ. ಆದರೆ ನನ್ನ ವೈದ್ಯರ ಸಲಹೆ ಪ್ರಕಾರ ಇನ್ನೂ ಒಂದು ವಾರ ವಿಶ್ರಾಂತಿ ತೆಗೆದು ಕೊಳ್ಳಬೇಕಿದೆ. ಈ ಕಾರಣಕ್ಕೆ ಬಿಗ್ ಬಾಸ್ ಈ ವಾರ ಎಪಿಸೋಡ್‌ನಲ್ಲಿ ನಾನಿರುವುದಿಲ್ಲ ಎಂದವರು ಹೇಳಿಕೊಂಡಿದ್ದಾರೆ.
https://mobile.twitter.com/KicchaSudeep/status/1382907248423227397