ಮಂಡ್ಯ: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದರು.
ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮಿ ಅವರ ಜತೆ ದೇವಾಲಯಕ್ಕೆ ತೆರಳಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀಮಠದ ಗದ್ದುಗೆಯ ದರ್ಶನ ಪಡೆದರು.